ಪ್ರವೀಣ್-ಪೂಜಾರಿ-missing.jpg
Spread the love

ದಿನಾಂಕ:21-07-2026 (ಹಾಯ್ ಉಡುಪಿ ನ್ಯೂಸ್)

ಉಡುಪಿ : ಶಿರ್ವ ಪೇಟೆಯಲ್ಲಿರುವ ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಪ್ರವೀಣ್ ಪೂಜಾರಿ (45) ಎಂಬವರು ಜುಲೈ 16 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಹೋಟೆಲ್‌ನಿಂದ ಹೊರಗೆ ಹೋದವರು ಇದುವರೆಗೂ ವಾಪಾಸು ಕೆಲಸಕ್ಕೂ ಬಾರದೇ, ತನ್ನ ಪತ್ನಿ ಮನೆಯಾದ ನಿಟ್ಟೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 08258-231333, ಮೊ.ನಂ:9480805421, ಕಾಪು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431 ಹಾಗೂ ಶಿರ್ವಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2554139, ಮೊ.ನಂ: 9480805451 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಿರ್ವ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

error: No Copying!