IMG-20241220-WA00051.jpg
Spread the love

ದಿನಾಂಕ:29-07-2026(ಹಾಯ್ ಉಡುಪಿ ನ್ಯೂಸ್) ಉಡುಪಿಯ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಒಬ್ಬ ಅಯೋಗ್ಯ ಎಂದು ಸಾಬೀತಾಗಿದೆ. ರಾಹುಲ್ ಗಾಂಧಿಯವರ ವಂಶವನ್ನು ನಾಶಪಡಿಸಲು ನಿಮಗೆ ಈ ಜನ್ಮದಲ್ಲಿ ಅವರ ಹತ್ತಿರ ಹೋಗಲು ಕೂಡ ನಿಮಗೆ ಯೋಗ್ಯತೆ ಇಲ್ಲ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಹೇಳಿದ್ದಾರೆ .

ಉಡುಪಿಯ ಶಾಸಕರಾದ ಯಶ್ ಪಾಲ್ ಸುವರ್ಣ ರವರು ಇಂದು ಬಿಜೆಪಿಯ ಪ್ರತಿಭಟನಾ ಸಭೆಯಲ್ಲಿ  ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕರದ ಸನ್ಮಾನ್ಯ ರಾಹುಲ್ ಗಾಂಧಿಯವರ ಬಗ್ಗೆ ಅವಾಚ್ಯವಾಗಿ ಮಾತನಾಡಿದ್ದು ,ಅಲ್ಲದೆ ಅವರ ಕುಟುಂಬವನ್ನು ನಾಶಪಡಿಸುತ್ತೇವೆ ಎನ್ನುವ ಹೇಳಿಕೆಯನ್ನು ನೀಡಿರುತ್ತಾರೆ. ಈ ಬಗ್ಗೆ ನಮ್ಮ ದೇಶದ ಚುನಾವಣಾ ಆಯೋಗ ಗಂಭೀರವಾಗಿ ಈ ಹೇಳಿಕೆಯನ್ನು ಪರಿಶೀಲಿಸಿ ಅವರನ್ನು ಈ ಕೂಡಲೇ ಶಾಸಕ ಸ್ಥಾನದಿಂದ ವಜಾ ಗೂಳಿಸಬೇಕು ಕೇಂದ್ರದ ಚುನಾವಣಾ ಆಯೋಗ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿರುತ್ತಾರೆ.

error: No Copying!