IMG_20260730_210931.jpg
Spread the love

ಉಡುಪಿ : ದಿನಾಂಕ:30-07-2026(ಹಾಯ್ ಉಡುಪಿ ನ್ಯೂಸ್)

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ಅವಧಿಯಲ್ಲಿ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಗರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದ್ದು, ಅನೇಕ ಕುಟುಂಬಗಳು ಆತಂಕಕ್ಕೆ ಒಳಗಾದವು. ಈ ಅನ್ಯಾಯದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ನ್ಯಾಯಸಮ್ಮತ ಹೋರಾಟಕ್ಕೆ ಬೆಂಬಲ ಸೂಚಿಸಿ ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಅನ್ನು ಖಂಡಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುವ ಮೂಲಕ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ್ದರು.

  • ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಹೋರಾಟ ನಡೆಸಿದ್ದ ಶ್ರೀ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ನೀಡಿರುವ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆಗಳನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಿನಾಂಕ:31-07-2026 ರಂದು ನಗರದ ಆದರ್ಶ ಆಸ್ಪತ್ರೆ ಬಳಿ ಬೆಳಿಗ್ಗೆ 10 ಘಂಟೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.
error: No Copying!