ದಿನಾಂಕ:31-07-2026(ಹಾಯ್ ಉಡುಪಿ ನ್ಯೂಸ್)
ಉಡುಪಿ: ದಿನಾಂಕ:31-07-2026(ಹಾಯ್ ಉಡುಪಿ ನ್ಯೂಸ್)ಲಂಚದ ಹಣ ಸ್ವೀಕರಿಸುವ ವಿಡಿಯೋ ಸಂಬಂಧಿಸಿ ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಿ ಎಸ್ಪಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.
ಹಣದ ಬೇಡಿಕೆ ಇಟ್ಟಿರುವ ಕುರಿತ ವಿಡಿಯೋಗಳು ಮತ್ತು ಆರೋಪಗಳ ಆಧಾರದ ಮೇಲೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಸುಧಾಕರ್ ನಾಯ್ಕ್ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಅದರ ಆಧಾರದ ಮೇಲೆ ಕಾರ್ಕಳ ಎಸ್.ಡಿವೈಎಸ್ಪಿ ವಿಜಯ ಪ್ರಸಾದ್, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಬಾಕಿ ಇರುವವರೆಗೆ ಅಮಾನತು ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
