IMG_20260731_082847.jpg
Spread the love

ದಿನಾಂಕ:31-07-2026(ಹಾಯ್ ಉಡುಪಿ ನ್ಯೂಸ್)

ಕುಂದಾಪುರ: ನಗರದ ಚರ್ಚ್ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆಗೈದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ.

ಮೃತ ವ್ಯಕ್ತಿಯನ್ನು ಐವನ್ ರಿಚಾರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .

ಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: No Copying!