Screenshot_2026-08-01-14-25-00-018_com.google.android.googlequicksearchbox-edit-1024x745.jpg
Spread the love

ದಿನಾಂಕ 01-08-2026(ಹಾಯ್ ಉಡುಪಿ ನ್ಯೂಸ್)

ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ವೇಳೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ(37) ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿ, ಅಲ್ಲಿಂದ ಅವರು ಮನೆಗೆ ಹೋಗಲು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆಯಿತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

error: No Copying!