gettyimages-1141698235-612x612.jpg
Spread the love

ಬ್ರಹ್ಮಾವರ: ದಿನಾಂಕ:03-08-2026(ಹಾಯ್ ಉಡುಪಿ ನ್ಯೂಸ್)ಹಂದಾಡಿ ಗ್ರಾಮದ ಗುಡ್ಡಿ ಬಾರ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮುಕ್ತಾ ಬಾಯಿ ಅವರು ಬಂಧಿಸಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮುಕ್ತಾ ಬಾಯಿ ಅವರಿಗೆ ದಿನಾಂಕ:01.08.2026 ರಂದು ಹಂದಾಡಿ ಗ್ರಾಮದ ಗುಡ್ಡಿ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಕುಶಾಲ್ ಶೆಟ್ಟಿ (66) ಮಣೂರು ಗ್ರಾಮ, ಬ್ರಹ್ಮಾವರ ತಾಲೂಕು ಎಂಬವನು ಮಟ್ಕಾ ಜುಗಾರಿ ಆಟಕ್ಕಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕೂಡಲೇ ಮುಕ್ತಾಬಾಯಿ ಅವರು ಠಾಣೆಯ ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ .

ದಾಳಿ ನಡೆಸಿದಾಗ ಸ್ಥಳದಲ್ಲಿ ಆರೋಪಿ ಕುಶಾಲ್ ಶೆಟ್ಟಿ ಯು ಸಾರ್ವಜನಿಕರನ್ನು ಕರೆದು ಮಟ್ಕಾ ಜುಗಾರಿ ಆಟದಲ್ಲಿ 00 ರಿಂದ 99 ರ ಒಳಗಿನ ನಂಬರ್‌ಗೆ  1 ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಹೇಳಿ ಜನರಿಂದ ಹಣವನ್ನು ಸಂಗ್ರಹಿಸಿ ಚೀಟಿಯಲ್ಲಿ ಬರೆಯುತ್ತಿದ್ದು ಕಂಡುಬಂದಿದ್ದು, ಪೊಲೀಸರು ಆರೋಪಿ ಕುಶಾಲ್ ಶೆಟ್ಟಿಯನ್ನು ಹಿಡಿದು ಬಂಧಿಸಿ ವಿಚಾರಣೆ ನಡೆಸಿದಾಗ ಮಟ್ಕಾ ಜುಗಾರಿ ನಡೆಸುತ್ತಿರುವುದನ್ನು ಆತ ಒಪ್ಪಿಕೊಂಡಿದ್ದು, ನಂತರ ಆತನಿಂದ ಮಟ್ಕಾ ಚೀಟಿ-1, ಬಾಲ್‌ಪೆನ್-1 ಹಾಗೂ ನಗದು ರೂ. 2,395/- ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 141/2026 ಕಲಂ: 112 BNS & 78 (i) (iii) KP ACT ರಂತೆ ಪ್ರಕರಣ ದಾಖಲಾಗಿದೆ.

error: No Copying!