ದಿನಾಂಕ:01-08-2026 (ಹಾಯ್ ಉಡುಪಿ ನ್ಯೂಸ್)
ಕುಂದಾಪುರ: ನಗರದ ಚರ್ಚ್ ರಸ್ತೆಯಲ್ಲಿ ಜುಲೈ-31 ರ ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ರವರ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಇಂದು ಬಂಧಿಸಿದೆ.
ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ.
ಹೆಬ್ರಿ ಮೂಲದ ಪ್ರಸ್ತುತ ಬಾರ್ಕೂರು ಕಚ್ಚೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಎನ್ನುವವರನ್ನು ನಿನ್ನೆ ಗುಂಡಿಕ್ಕಿ ಹತ್ಯೆ ನಡೆಸಿದ್ದ ಆರೋಪಿ ಡೆರಿಕ್ ಆ ನಂತರ ತಲೆಮರೆಸಿಕೊಂಡಿದ್ದ.
ಭಟ್ಕಳದ ಬೆಳಕೆ ಹೇರಬುಡಿಕೆ ಎಂಬಲ್ಲಿ ಶನಿವಾರ ಅವನನ್ನು ಪೋಲೀಸರು ಬಂಧಿಸಿದ್ದು, ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಎಸ್ಪಿ ಹರಿರಾಂ ಶಂಕರ್ ಪತ್ರಿಕೆಗೆ ತಿಳಿಸಿದ್ದಾರೆ.
