kannadaprabha_2026-08-03_4c2vkez7_Kavyarani.jpg
Spread the love

ದಿನಾಂಕ:03-08-2026(ಹಾಯ್ ಉಡುಪಿ ನ್ಯೂಸ್)

ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮೊದಲ ಕಂತಿನಲ್ಲಿ ಡಾ. ರೂಪಾ ಅವರಿಂದ 5 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ನಂತರ ರೂಪಾ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಎರಡನೇ ಕಂತಿನಲ್ಲಿ 5.50 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಕಾವ್ಯಾರಾಣಿ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

error: No Copying!