ಕಾರ್ಕಳ: ದಿನಾಂಕ:04-08-2026(ಹಾಯ್ ಉಡುಪಿ ನ್ಯೂಸ್) ಕಸಬಾ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ಸಮೀಪ ಇರುವ ಮಹಾಮ್ಮಾಯಿ ಮುಖ್ಯಪ್ರಾಣ ಎಂಟರ್ಪ್ರೈಸಸ್ ಎಂಬ ಅಂಗಡಿಯಲ್ಲಿ ನಡೆಯುತ್ತಿದ್ದ ಅಕ್ರಮ ಮಟ್ಕಾ ಜುಗಾರಿ ಅಡ್ಡೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶಿವಕುಮಾರ್ ಅವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ದಿನಾಂಕ 01/08/2026 ರಂದು ಆರೋಪಿತರಾದ 1. ವೀರೇಂದ್ರ ಶೆಟ್ಟಿ(42), ಮಿಯ್ಯಾರು ಗ್ರಾಮ ಕಾರ್ಕಳ , 2) ಪ್ರಮೋದ್ ಇವರು ಜೊತೆಯಾಗಿ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಕಾರ್ಕಳ ಸಾರ್ವಜನಿಕ ಬಸ್ ಸ್ಟಾಂಡ್ ಬಳಿ ಇರುವ ಮಹಾಮ್ಮಾಯಿ ಮುಖ್ಯಪ್ರಾಣ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ 1 ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಹೇಳಿ ಸಾರ್ವಜನಿಕರಿಂದ ಮಟ್ಜಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹ ಮಾಡುತ್ತಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶಿವಕುಮಾರ್ ಎಸ್ ಆರ್ ಅವರಿಗೆ ಬಂದ ಮಾಹಿತಿಯ ಮೇರೆಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ .
ದಾಳಿ ನಡೆಸಿದಾಗ ಸ್ಥಳದಲ್ಲಿದ್ದ ಮಟ್ಕಾ ಜುಗಾರಿ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿಧ್ದು ಆರೋಪಿಗಳು ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ನಗದು ಹಣ ಒಟ್ಟು 1,415/-, ಮಟ್ಕಾ ಸಂಖ್ಯೆ ಬರೆದ ಚೀಟಿ -1 , ಪೆನ್ನು -1 ಮತ್ತು OPPO ಕಂಪೆನಿಯ ಮೊಬೈಲ್ ಪೋನ್ – 1 ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 112 BNS ಮತ್ತು ಕಲಂ: 78 (i) (iii) KP ACT ರಂತೆ ಪ್ರಕರಣ ದಾಖಲಾಗಿದೆ.
