Screenshot_2026-08-04-10-58-00-145_com-390x220.jpg
Spread the love

ದಿನಾಂಕ:04-08-2026 (ಹಾಯ್ ಉಡುಪಿ ನ್ಯೂಸ್)

ಕುಂದಾಪುರ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಶ್ರೀ ಬ್ರಹ್ಮಸ್ಥಾನ ದೇವಸ್ಥಾನದ ಸಮೀಪದಲ್ಲಿರುವ ಗುರು ಬ್ರಹ್ಮ ಜನರಲ್ ಸ್ಟೋರ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ.

ಅಂಗಡಿ ಮಾಲೀಕ ಸಂತೋಷ್ ಅವರು ವ್ಯಾಪಾರ ಮುಗಿಸಿ ಮನೆಗೆ ತೆರಳಿದ ಬಳಿಕ ತಡರಾತ್ರಿ ಏಕಾಏಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಅಂಗಡಿಗೆ ವ್ಯಾಪಿಸಿ, ದಿನಸಿ ಸಾಮಗ್ರಿಗಳು, ಫ್ರಿಡ್ಜ್, ಪೀಠೋಪಕರಣಗಳು ಸೇರಿದಂತೆ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ.
ಅಂಗಡಿಯಲ್ಲಿದ್ದ ಫ್ರಿಡ್ಜ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು  ಅಂದಾಜು ಮಾಡಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

error: No Copying!