HO3R9tla4AAs2WC.jpg
Spread the love

ಬೆಂಗಳೂರು: ದಿನಾಂಕ:04-08-2026(ಹಾಯ್ ಉಡುಪಿ ನ್ಯೂಸ್) ಇಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ, ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ನಿಯಮಗಳಿಗೆ ಸಂಬಂಧಿಸಿದಂತೆ ತಮ್ಮ ಮನವಿಯನ್ನು ಸಲ್ಲಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾದ ನಿಯಮಗಳ ತಿದ್ದುಪಡಿಯಿಂದಾಗಿಯೇ ಇಂದು ಕೃಷಿ ಪದವೀಧರರಿಗೆ ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ವಿದ್ಯಾರ್ಥಿಗಳ ಅಳಲು ಹಾಗೂ ಭವಿಷ್ಯದ ಆತಂಕದ ಮಾತುಗಳನ್ನು ಆಲಿಸಿದ್ದೇನೆ. ಕೃಷಿ ಪದವೀಧರರ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗದಂತೆ, ಈ ಸಮಸ್ಯೆಯನ್ನು ಕಾನೂನಾತ್ಮಕವಾಗಿ ಹಾಗೂ ಸಕಾರಾತ್ಮಕವಾಗಿ ಆದಷ್ಟು ಬೇಗ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ ಅವರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

error: No Copying!