IMG_20260807_110918-2-1536x1536.jpg
Spread the love

ದಿನಾಂಕ:07-08-2026(ಹಾಯ್ ಉಡುಪಿ ನ್ಯೂಸ್)

ಕೊಲ್ಲೂರು: ಬೆಳ್ಳಾಲ ಗ್ರಾಮದಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಆರೋಪದಡಿ ಕೊಲ್ಲೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇದೇ ಘಟನೆಗೆ ಸಂಬಂಧಿಸಿದಂತೆ ಯುವಕನ ವಿರುದ್ಧ ನೊಂದ ಮಹಿಳೆಯೊಬ್ಬರು ನೀಡಿದ ಜಾತಿ ನಿಂದನೆ ಹಾಗೂ ಮಾನಕ್ಕೆ ಧಕ್ಕೆ ಉಂಟು ಮಾಡಿದ ಆರೋಪದ ದೂರಿನ ಮೇರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿ ಆರೋಪಿಯನ್ನೂ ಬಂಧಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್‌ 6ರಂದು ನೊಂದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಸನತ್‌ ಕುಂದಾಪುರ ವಿರುದ್ಧ ಅಪರಾಧ ಸಂಖ್ಯೆ 51/2026ರಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಇದೇ ವೇಳೆ, ಮಹಿಳೆಯ ಕುಟುಂಬಸ್ಥರು ತನ್ನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ್ದಾರೆ ಎಂದು ಸನತ್‌ ಕುಂದಾಪುರ ನೀಡಿದ ಪ್ರತಿದೂರಿನ ಮೇರೆಗೆ ಅಪರಾಧ ಸಂಖ್ಯೆ 52/2026ರಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದ್ದು, ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಎರಡೂ ಪ್ರಕರಣಗಳ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

error: No Copying!