IMG-20260807-WA0054.jpg
Spread the love

ದಿನಾಂಕ:07-08-2026(ಹಾಯ್ ಉಡುಪಿ ನ್ಯೂಸ್)

ಪಡುಬಿದ್ರಿ : ಮುದರಂಗಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರರಾದ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

error: No Copying!