IMG-20260810-WA0009-1536x1184.jpg
Spread the love

ದಿನಾಂಕ:10-08-2026 (ಹಾಯ್ ಉಡುಪಿ ನ್ಯೂಸ್)

ಶಿರ್ವ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಉತ್ತರಾಖಂಡ ಮೂಲದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರ ಮೂಲದ ಜಿಯಾವುಲ್ಲಾ ಅಲಿಯಾಸ್ ದೀಪಕ್ ನನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ ಅವರ ನೇತೃತ್ವದ ಪೊಲೀಸ್ ತಂಡವು ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.

ಆರೋಪಿಗಳಿಂದ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಹಾಗೂ ಶೂಟೌಟ್‌ಗೆ ಬಳಸಲಾದ ಶಸ್ತ್ರಾಸ್ತ್ರ ಸೇರಿದಂತೆ ಇತರ ಅಂಶಗಳ ಕುರಿತು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

error: No Copying!