ಬೆಂಗಳೂರು: ಜೂನ್ ೪ (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಇದರ ಜಿಲ್ಲಾಧ್ಯಕ್ಷರುಗಳ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಿತು.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷರಾದ ಶ್ರೀ ಟಿ ಎ ನಾರಾಯಣ ಗೌಡರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸ್ಯಾಂಟಮ್ ಹೋಟೆಲ್ ನಲ್ಲಿ ಇಂದು ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾದ್ಯಕ್ಷರುಗಳ ಸಭೆ ನಡೆಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಬೆಳ್ಳಿ ಹಬ್ಬ ವರ್ಷಾಚರಣೆಯ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸುಜಯ ಪೂಜಾರಿ ತಿಳಿಸಿದ್ದಾರೆ.