HQ0aeDaaAAAuR0V.jpg
Spread the love

ಬೆಂಗಳೂರು: ದಿನಾಂಕ:29-08-2026 (ಹಾಯ್ ಉಡುಪಿ ನ್ಯೂಸ್) ರವೀಂದ್ರ ಕಲಾಕ್ಷೇತ್ರದಲ್ಲಿ ನಿನ್ನೆ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ. ಕೆ. ಹರಿಪ್ರಸಾದ್, ಸಚಿವರಾದ ಶ್ರೀ ಶಿವರಾಜ್ ಎಸ್. ತಂಗಡಗಿ ಹಾಗೂ ಶ್ರೀ ಮಧು ಬಂಗಾರಪ್ಪ, ಆರ್ಯ ಈಡಿಗ ಸಮಾಜದ ಅಧ್ಯಕ್ಷರಾದ ಡಾ. ಎಂ. ತಿಮ್ಮೇಗೌಡರು, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಮಂಜುನಾಥ ಪೂಜಾರಿ, ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ನಿಟ್ಟೂರಿನ ಶ್ರೀ ರೇಣುಕಾನಂದ ಸ್ವಾಮೀಜಿ, ಸಂಡೂರಿನ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ, ಸಾರಗನಜಡ್ಡು ಶ್ರೀ ಯೋಗೇಂದ್ರ ಅವಧೂತರು ಮತ್ತಿತರರು ಉಪಸ್ಥಿತರಿದ್ದರು.


error: No Copying!