HRCRiT1bkAAynEJ.jpg
Spread the love

ದಿನಾಂಕ:01-09-2026(ಹಾಯ್ ಉಡುಪಿ ನ್ಯೂಸ್)

ಬೆಂಗಳೂರಿನ ನೆಹರು ತಾರಾಲಯದ ಯು.ಆರ್. ರಾವ್ ಭವನದಲ್ಲಿ ಬಿಡಿಎ ಅಧ್ಯಕ್ಷರಾದ ಶ್ರೀ ಎನ್. ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂಮಾಲೀಕರಿಗೆ ನಿವೇಶನ ಪತ್ರ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, 600ಕ್ಕೂ ಹೆಚ್ಚು ಭೂಮಾಲೀಕರು ಹಾಗೂ ರೈತರಿಗೆ ನಿವೇಶನ ಪತ್ರಗಳನ್ನು ಹಸ್ತಾಂತರಿಸಿದರು.

ಉತ್ತರ ಬೆಂಗಳೂರಿನ ಆವಲಹಳ್ಳಿ, ರಾಮಗೊಂಡನಹಳ್ಳಿ, ಜಾರಕಬಂಡೆ ಕಾವಲ್ ಸೇರಿದಂತೆ 17 ಹಳ್ಳಿಗಳ 3,069 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಲಾಗಿದೆ. ಡಾ. ಕೆ. ಶಿವರಾಮ ಕಾರಂತ ಬಡಾವಣೆಗೆ 3,200 ಭೂಮಾಲೀಕರು ಹಾಗೂ ರೈತರು ಜಾಗ ನೀಡಿದ್ದು, ಇಲ್ಲಿ ವಿವಿಧ ಅಳತೆಯ 34,992 ನಿವೇಶನಗಳನ್ನು ಸಿದ್ಧಪಡಿಸಲಾಗಿದೆ. ಈ ಪೈಕಿ 18 ಸಾವಿರ ನಿವೇಶನಗಳನ್ನು ಭೂಮಾಲೀಕರು ಹಾಗೂ ರೈತರಿಗೆ ಮೀಸಲಿಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಕೃಷ್ಣಬೈರೇಗೌಡ, ಶಾಸಕರಾದ ಎಸ್‌. ಮುನಿರಾಜು, ಎಸ್‌.ಆರ್‌ ವಿಶ್ವನಾಥ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

error: No Copying!