FB_IMG_1788372929756.jpg
Spread the love

ಉಡುಪಿ: ದಿನಾಂಕ:02-09-2026(ಹಾಯ್ ಉಡುಪಿ ನ್ಯೂಸ್) ಪಶ್ಚಿಮ ವಲಯದ ನೂತನ ಪೊಲೀಸ್ ಉಪಮಹಾನಿರೀಕ್ಷಕರಾದ ಶ್ರೀ ಚೇತನ್ ಆರ್. ಐ.ಪಿ.ಎಸ್ ಅವರು ಉಡುಪಿ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಉಪಸ್ಥಿತರಿದ್ದರು.ಜಿಲ್ಲಾ ಪೊಲೀಸ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಕಾರ್ಯನಿರ್ವಹಣೆ ಹಾಗೂ ಆಡಳಿತಾತ್ಮಕ ಚಟುವಟಿಕೆಗಳ ಪರಿಶೀಲನೆ ನಡೆಸಿದರು. ನಂತರ ಜಿಲ್ಲೆಯ ಎಲ್ಲಾ ಪೊಲೀಸ್ ಉಪವಿಭಾಗಗಳ ಪೊಲೀಸ್ ಉಪಾಧೀಕ್ಷಕರೊಂದಿಗೆ ಸಭೆ ನಡೆಸಿ, ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಕಾಪಾಡುವುದು, ಅಪರಾಧ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ವಿಶ್ವಾಸಕ್ಕೆ ಆದ್ಯತೆ ನೀಡುವಂತೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

error: No Copying!