ಗಂಗೊಳ್ಳಿ: ರಥಬೀದಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಯವರಾದ ಸುಧರ್ಶನ್ ಅವರು ಬಂಧಿಸಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುದರ್ಶನ್ ಅವರು ಠಾಣೆಯಲ್ಲಿರುವಾಗ ಗಂಗೊಳ್ಳಿ ಗ್ರಾಮದ ಬೀಟ್ ಸಿಬ್ಬಂದಿಯವರು ಗಂಗೊಳ್ಳಿ ಗ್ರಾಮದ ಗಂಗೊಳ್ಳಿ ರಥಬೀದಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಟ್ಕ ಜುಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡಿದಂತೆ ಪಿಎಸ್ಐ ಸುದರ್ಶನ್ ರವರು ಕೂಡಲೇ ಸಿಬ್ಬಂದಿಗಳೊಂದಿಗೆ ಹೊರಟು ಮೇಲಿನ ಸ್ಥಳವನ್ನು ತಲುಪಿ ಮರೆಯಲ್ಲಿ ನಿಂತು ನೋಡಿದಾಗ ಉದಯ ದೇವಾಡಿಗ ಎಂಬಾತನು ಸಾರ್ವಜನಿಕರನ್ನು ಕರೆದು ಒಂದು ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಜೋರಾಗಿ ಕೂಗುತ್ತಾ ಮಟ್ಕಾ ಜುಗಾರಿ ಬಗ್ಗೆ ಹಣ ಸಂಗ್ರಹಿಸುತ್ತಾ ಒಂದು ಹಾಳೆಯಲ್ಲಿ ಪೆನ್ನಿನಿಂದ ಬರೆದುಕೊಳ್ಳುತ್ತಾ ಹಣವನ್ನು ಸಾರ್ವಜನಿಕರಿಂದ ಸಂಗ್ರಹಿಸಿ ತನ್ನ ಕಿಸೆಯಲ್ಲಿ ಹಾಕಿಕೊಂಡು ಮಟ್ಕಾ ಜುಗಾರಿ ಬಗ್ಗೆ ಹಣ ಸಂಗ್ರಹಿಸುತ್ತಿದ್ದಾಗ ಪೊಲೀಸರು ದಾಳಿ ಮಾಡಿ ಆತನನ್ನು ಬಂಧಿಸಿದ್ದಾರೆ.
ಉದಯ ದೇವಾಡಿಗ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ನಗದು ಒಟ್ಟು 750/- ರೂಪಾಯಿ, ಮಟ್ಕಾ ಚೀಟಿ, ಬಾಲ್ ಪೆನ್ನನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 43/2026 U/s : 78(1)(111) KP ACT ರಂತೆ ಪ್ರಕರಣ ದಾಖಲಾಗಿದೆ.
