img_6147.jpeg
Spread the love

ದಿನಾಂಕ:10-09-2026(ಹಾಯ್ ಉಡುಪಿ ನ್ಯೂಸ್)

ಓವರ್‌ಟೇಕ್ ವೇಳೆ ಭೀಕರ ದುರಂತ

ಕಬ್ಬಿಣದ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಕೆಎಸ್‌ಆರ್‌ಟಿಸಿ ಬಸ್‌ ಓವರ್‌ಟೇಕ್ ಮಾಡಲು ಮುಂದಾದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್‌ನ ಮುಂಭಾಗದ ಒಳಭಾಗಕ್ಕೆ ನುಗ್ಗಿವೆ. ಇದರಿಂದ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್‌ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ . 

ಅಪಘಾತದ ವೇಳೆ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರು ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ. 

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

error: No Copying!