HR8nisxaYAAH0fx.jpg
Spread the love

ಬೆಂಗಳೂರು: ದಿನಾಂಕ:11-09-2026(ಹಾಯ್ ಉಡುಪಿ ನ್ಯೂಸ್) ಗ್ರಹ ಸಚಿವ ಪ್ರಿಯಾಂಕ ಖರ್ಗೆ ಯವರು ಇಂದು ಅಡ್ವೊಕೇಟ್ ಜನರಲ್, ಗೃಹ ಇಲಾಖೆ ಮತ್ತು ಅಭಿಯೋಗ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ನ್ಯಾಯದಾನದ ಪ್ರಕ್ರಿಯೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಿದರು.

◆ ನ್ಯಾಯಾಲಯಗಳಲ್ಲಿ ಸರ್ಕಾರದ ಪರವಾಗಿ ನಡೆಯುವ ವಿವಿಧ ಮೊಕದ್ದಮೆಗಳಲ್ಲಿ ಸರ್ಕಾರದ ನಿಲುವು ಹಾಗೂ ಹಿತಾಸಕ್ತಿಯನ್ನು ಸಮರ್ಥವಾಗಿ ಪ್ರಸ್ತುತಪಡಿಸುವ ನಿಟ್ಟಿನಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು.

◆ ಸರ್ಕಾರದ ಪ್ರಕರಣಗಳು ಕೇವಲ ನ್ಯಾಯಾಲಯದಲ್ಲಿ ವಾದ ಮಂಡಿಸುವ ಹಂತಕ್ಕೆ ಸೀಮಿತವಾಗದೆ, ಪ್ರಕರಣದ ಆರಂಭಿಕ ಹಂತದಿಂದಲೇ ಸಂಬಂಧಿಸಿದ ಇಲಾಖೆಗಳು, ತನಿಖಾಧಿಕಾರಿಗಳು ಹಾಗೂ ಸರ್ಕಾರಿ ವಕೀಲರ ನಡುವೆ ಸಮನ್ವಯ ಇರಬೇಕು.

◆ ಸರ್ಕಾರದ ಪರವಾಗಿ ವಾದ ಮಂಡಿಸುವ ಸರ್ಕಾರಿ ವಕೀಲರಿಗೆ ಪ್ರಕರಣದ ಸಂಪೂರ್ಣ ಹಿನ್ನೆಲೆ, ಅಗತ್ಯ ದಾಖಲೆಗಳು ಹಾಗೂ ವಾಸ್ತವಾಂಶಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸಬೇಕು.

◆ ಮಹಿಳೆಯರು, ಮಕ್ಕಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪರಿಣಾಮಕಾರಿ ಕಾನೂನು ಕ್ರಮ ಹಾಗೂ ಪ್ರಕರಣಗಳ ತ್ವರಿತ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದರು.

error: No Copying!