ಬೆಂಗಳೂರು: ದಿನಾಂಕ:14-09-2026(ಹಾಯ್ ಉಡುಪಿ ನ್ಯೂಸ್) ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸಲು, ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರದ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದ್ದೇವೆ ಎಂದು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ..
ಕರಾವಳಿಯ ಜನರ ಕಷ್ಟ-ಸುಖಗಳನ್ನು ಹತ್ತಿರದಿಂದ ಕಂಡು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಸ್ಥಳದಲ್ಲೇ ನಿರ್ಧಾರ ಕೈಗೊಳ್ಳುವುದು ನಮ್ಮ ಉದ್ದೇಶ. ಬಂದರು, ಮೂಲಸೌಕರ್ಯ, ಮೀನುಗಾರಿಕೆ ಮತ್ತು ಕೈಗಾರಿಕಾ ರಂಗಗಳಿಗೆ ನವಚೈತನ್ಯ ತುಂಬುವ ಮೂಲಕ ಕರಾವಳಿಯ ಸಮೃದ್ಧಿಗೆ ಹೊಸ ಮುನ್ನುಡಿ ಬರೆಯಲು ‘ಟೀಮ್ ಕರ್ನಾಟಕ’ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ..


