HSWq57WaMAAh7aI.jpg
Spread the love

ಕಲಬುರಗಿ: ದಿನಾಂಕ:16-09-2026(ಹಾಯ್ ಉಡುಪಿ ನ್ಯೂಸ್) ಇಂದು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮಕ್ಕೆ ಮುನ್ನುಡಿ ಬರೆಯಲಾಯಿತು. ಕಲಬುರಗಿ ನಗರದ ಪಬ್ಲಿಕ್‌ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್‌ ಫೆಸ್ಟಿವಲ್‌) ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಪ್ರವಾಸೋದ್ಯಮ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿ, ಬಳ್ಳಾರಿ ಜೀನ್ಸ್‌ ಖರೀದಿಸಿ ಸ್ಥಳೀಯ ಉದ್ಯಮಕ್ಕೆ ಬೆಂಬಲ ಸೂಚಿಸಿದರು .ಇದಾದ ಬಳಿಕ ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ್, ಡಾ. ಅಜಯ್ ಸಿಂಗ್, ಲೋಕಸಭಾ ಸದಸ್ಯರಾದ ಶ್ರೀ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಶ್ರೀಮತಿ ಖನಿಜ್ ಫಾತಿಮಾ, ಶ್ರೀ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ತಿಪ್ಪಣ್ಣಪ್ಪ ಕಮಕನೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು

error: No Copying!