ಹಾಸನ : ದಿನಾಂಕ:21-09-2026(ಹಾಯ್ ಉಡುಪಿ ನ್ಯೂಸ್) ಜಿಲ್ಲೆಯ ಸಕಲೇಶಪುರದಲ್ಲಿ ಇಂದು ‘ಕಸ್ತೂರಿ ರಂಗನ್ ವರದಿ’ ವಿಚಾರವಾಗಿ ಸಾರ್ವಜನಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.



ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಶಿವಲಿಂಗೇಗೌಡ, ಸಂಸದರಾದ ಶ್ರೀ ಶ್ರೇಯಸ್ ಪಟೇಲ್, ಶ್ರೀ ಜಿ.ಸಿ. ಚಂದ್ರಶೇಖರ್, ಶಾಸಕರಾದ ಶ್ರೀ ಸಿಮೆಂಟ್ ಮಂಜು, ಶ್ರೀ ಟಿ.ಡಿ. ರಾಜೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಎ.ಎಸ್. ಪೊನ್ನಣ್ಣ, ಬಿಡಿಎ ಅಧ್ಯಕ್ಷರಾದ ಶ್ರೀ ಎನ್.ಎ. ಹ್ಯಾರಿಸ್, ಜಿಲ್ಲಾಧಿಕಾರಿಗಳಾದ ಶ್ರೀಮತಿ ಲತಾ ಕುಮಾರಿ, ಮಾಜಿ ಶಾಸಕರಾದ ಶ್ರೀ ಹೆಚ್.ಕೆ. ಕುಮಾರಸ್ವಾಮಿ, ಶ್ರೀ ಬಿ.ಆರ್. ಗುರುದೇವ್, ಶ್ರೀ ಹೆಚ್.ಎಂ. ವಿಶ್ವನಾಥ್, ಶ್ರೀ ಗೋಪಾಲಸ್ವಾಮಿ, ಕಾಂಗ್ರೆಸ್ ಮುಖಂಡರಾದ ಶ್ರೀ ಮುರಳಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.
