IMG-20260920-WA0007-1536x1152.jpg
Spread the love

ದಿನಾಂಕ : 21-09-2026(ಹಾಯ್ ಉಡುಪಿ ನ್ಯೂಸ್)

ಕಾರ್ಕಳ: ಮೂಡುಬಿದಿರೆ – ಕಾರ್ಕಳ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಹಾಗೂ ವಿಶಾಲ್ ಕಂಪನಿಯ ಬಸ್ ನಡುವೆ ಮಧ್ಯಾಹ್ನ ಸುಮಾರು 3.30ಕ್ಕೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ರಾಮನಾಥ ರೈ ಅವರ ಪಿಎ ಡೆನ್ಜೆಲ್ ಅವರ ಬಲಗಾಲಿಗೆ ಮುರಿತವಾಗಿದ್ದು, ಅವರನ್ನು ತಕ್ಷಣ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಪೊಯಾ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆ ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

error: No Copying!