IMG-20260923-WA0042-1536x691.jpg
Spread the love

ದಿನಾಂಕ:23-09-2026(ಹಾಯ್ ಉಡುಪಿ ನ್ಯೂಸ್)

ಉಡುಪಿ: ಹೂಡೆಯಲ್ಲಿ ನಡೆದ ನವಜಾತ ಶಿಶುವಿನ ಸಾವಿನ ಪ್ರಕರಣದ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸ್ಥಳೀಯ ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕವನ್ನು ನಿವಾರಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನಿಯೋಗವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿತು.

ಮನವಿಯನ್ನು ಸ್ವೀಕರಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಎಸ್. ನಾಯ್ಡು ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.

ಈ ನಿಯೋಗದಲ್ಲಿ ಎಸ್‌ಡಿಪಿಐ ಹೂಡೆ ಶಾಖೆಯ ಅಧ್ಯಕ್ಷರಾದ ಅಲ್ತಾಫ್ ಕೆಮ್ಮಣ್ಣು, ಉಡುಪಿ ವಿಧಾನಸಭಾ ಕ್ಷೇತ್ರ ಸಮಿತಿಯ ಸದಸ್ಯರಾದ ಮುಜಕ್ಕಿರ್, ಫೈಜಲ್ ಹಾಗೂ ಬಶೀರ್ ಅವರು ಉಪಸ್ಥಿತರಿದ್ದರು.

error: No Copying!