ಬೆಂಗಳೂರು: ದಿನಾಂಕ:25-09-2026 (ಹಾಯ್ ಉಡುಪಿ ನ್ಯೂಸ್) ನಾಡನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುವ ಕಾಯಕಯೋಗಿಗಳ ನಿಸ್ವಾರ್ಥ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ, ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆಯನ್ನು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಉದ್ಘಾಟಿಸಿದರು.






ಕಾರ್ಯಕ್ರಮದಲ್ಲಿ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ, ಶ್ರೀ ಹೆಚ್. ಸಿ. ಬಾಲಕೃಷ್ಣ, ಡಾ. ಯತೀಂದ್ರ ಸಿದ್ದರಾಮಯ್ಯ, ಶ್ರೀ ಕೆ. ಎಸ್. ಬಸವಂತಪ್ಪ, ಮಾಜಿ ಸಚಿವರಾದ ಶ್ರೀ ಹೆಚ್. ಆಂಜನೇಯ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಶ್ರೀ ಪಿ. ರಘು, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಶ್ರೀ ಅಶೋಕ್ ಸಾಲಪ್ಪ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶ್ರೀಮತಿ ಬಿ. ಬಿ. ಕಾವೇರಿ, ಪೌರಕಾರ್ಮಿಕ ಅಭಿವೃದ್ಧಿ ಸಂಘದ ಅಧ್ಯಕ್ಷೆ ಶ್ರೀಮತಿ ಶೈಲಾ ಕೆ. ಡಿ., ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಶ್ರೀ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.
