IMG_20260925_180902.jpg
Spread the love

ದಿನಾಂಕ:26-09-2026 (ಹಾಯ್ ಉಡುಪಿ ನ್ಯೂಸ್)

ಕುಂದಾಪುರ: ಕಟ್‌ಬೆಲ್ತೂರು ಗ್ರಾಮದ ನಿವಾಸಿ, ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.24ರಂದು ನಡೆದಿದೆ.
ಮೃತರನ್ನು ಕಟ್‌ಬೆಲ್ತೂರು ಗ್ರಾಮದ ರಾಘವೇಂದ್ರ ಜೋಗಿ ಎಂದು ಗುರುತಿಸಲಾಗಿದೆ. ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಕಳೆದ 18 ವರ್ಷಗಳಿಂದ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಸೆ.24ರಂದು ಬೆಳಗ್ಗೆ 9.45ರಿಂದ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಮನೆಯ ಸಮೀಪದ ರವಿ ಬಳೆಗಾರರ ಜಾಗದಲ್ಲಿದ್ದ ಮರಕ್ಕೆ ನೇಣು ಬಿಗಿದು ರಾಘವೇಂದ್ರ ಜೋಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಕುಟುಂಬಸ್ಥರು ಹಾಗೂ ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿ ಕುಂದಾಪುರದ ಆದರ್ಶ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪರಿಶೀಲಿಸಿದ ವೈದ್ಯಾಧಿಕಾರಿಗಳು ಮಧ್ಯಾಹ್ನ 1.19ಕ್ಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮನೆಯಲ್ಲಿದ್ದ ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ತಾನೇ ಕಾರಣ ಎಂಬುದಾಗಿ ಬರೆದಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವೈಯಕ್ತಿಕ ಸಮಸ್ಯೆ ಅಥವಾ ಇತರ ಕಾರಣಗಳಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: No Copying!