Spread the love

ಉಡುಪಿ : ಜೂನ್ ೧೧ (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರ ಹುಟ್ಟು ಹಬ್ಬವನ್ನು ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು.

ದಿನಾಂಕ 10.06.2022. ರಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿಯ ಜಿಲ್ಲಾ ಘಟಕದ ವತಿಯಿಂದ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡರ 56ನೇ ಹುಟ್ಟು ಹಬ್ಬದ ಆಚರಣೆಯನ್ನು ಉಡುಪಿ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾll ಚಂದ್ರಶೇಖರ ಅಡಿಗ, ಕ. ರ. ವೇ. ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ, ಜಿಲ್ಲಾ ಗೌರವಾಧ್ಯಕ್ಷರಾದ ಡಾll ನೇರಿ ಕಾರ್ನೆಲಿಯೋ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ರಾಘವೇಂದ್ರ ನಾಯಕ್, ಉಪಾದ್ಯಕ್ಷರಾದ ಉಮೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸಂತೋಷ್, ಜಿಲ್ಲಾ ಮಹಿಳಾ ಸಲಹೆಗಾರ್ತಿ ಸುನಂದಾ ಕೋಟ್ಯಾನ್, ಉಡುಪಿ ತಾಲೂಕು ಅಧ್ಯಕ್ಷ ಪ್ರಭಾಕರ್ ಪೂಜಾರಿ ಅ ರಾ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಮುಕ್ತಪ್ರಿಯ, ಜಿಲ್ಲಾ ಮಹಿಳಾ ಸಾಂಸ್ಕ್ರುತಿಕ ಕಾರ್ಯದರ್ಶಿ ಮಮತಾ, ಬ್ರಹ್ಮಾವರ ತಾಲೂಕು ಮಹಿಳಾ ಅಧ್ಯಕ್ಷೆ ದೇವಕೀ ಬಾರ್ಕೂರು, ಕಾಪು ತಾಲೂಕು ಅಧ್ಯಕ್ಷ ವೀರೇಶ್ ಪಿ. ಕೆ. ಕಾಪು ತಾಲೂಕು ಮಹಿಳಾ ಅಧ್ಯಕ್ಷೆ ಗೀತಾ ಪಾಂಗಳ, ಜಿಲ್ಲಾ ಸದಸ್ಯರುಗಳಾದ ನಿತಿನ್, ರಮೇಶ್, ಲಕ್ಷ್ಮೀ ಉಪಸ್ಥಿತರಿದ್ದರು.

error: No Copying!