ಬೆಂಗಳೂರು: ದಿನಾಂಕ: 02-10-2026 (ಹಾಯ್ ಉಡುಪಿ ನ್ಯೂಸ್) ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ, ಗಾಂಧಿ ಡಿಜಿಟಲ್ ಮ್ಯೂಸಿಯಂ ಮತ್ತು ಗಾಂಧಿ ಪುಸ್ತಕಗಳ ಲೋಕಾರ್ಪಣೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಭಾಗವಹಿಸಿ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.



ಇದೇ ವೇಳೆ, ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು ಹಾಗೂ ವಿವಿಧ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ರಿಜ್ವಾನ್ ಅರ್ಷದ್, ಹೆಚ್.ಸಿ. ಬಾಲಕೃಷ್ಣ, ಮಾಜಿ ಸಚಿವರಾದ ಹೆಚ್.ಕೆ. ಪಾಟೀಲ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ನಿವೃತ್ತ ನ್ಯಾಯಮೂರ್ತಿ ಟಿ.ಜಿ. ಶಿವಶಂಕರಗೌಡ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್, ಆಯುಕ್ತ ಎಂ.ಎನ್. ಅನುಚೇತ್ ಮತ್ತಿತರರು ಉಪಸ್ಥಿತರಿದ್ದರು.
