ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತವನ್ನು ಡಿಲೀಟ್ ಮಾಡಿಸಿ ಮತ ಕಳ್ಳತನ ನಡೆಸಿದ ಬಿಜೆಪಿ ನಾಯಕರ ನಿಜ ಬಣ್ಣವನ್ನು ರಾಜ್ಯದ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಬಯಲು ಗೊಳಿಸಿ ರಾಜ್ಯದ ಮತದಾರರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತದಾರರಾದ ಅಲ್ಪಸಂಖ್ಯಾತರು.ಹಿಂದುಳಿದ ವರ್ಗದವರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು.ಮತ್ತು ರೈತರು ಗಳು ಮತ್ತು ಎಲ್ಲಾ ವರ್ಗದ ಬಡ ಜನರು ಇವರೆಲ್ಲರ ಮತವನ್ನು ಡಿಲೀಟ್ ಮಾಡಿ ಮುಂದಿನ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಯನ್ನು ಏರುವ ಕನಸು ಕಂಡ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕನಸನ್ನು ನಮ್ಮ ರಾಜ್ಯದ ಡೈನಮಿಕ್ ಮುಖ್ಯಮಂತ್ರಿ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರು ಭಗ್ನ ಗೊಳಿಸಿದ್ದಾರೆ .
ರಾಜ್ಯದ ಮತದಾರರಿ ಗಾಗಿ ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆ ರಾಜ್ಯದ ಚುನಾವಣಾ ಆಯೋಗದ ಮುಖ್ಯಸ್ಥರ ಜೊತೆ ರಾಜ್ಯದ ಮತದಾರರ ಪರವಾಗಿ ಮನವಿಯನ್ನು ನೀಡಿ ಎಲ್ಲರಿಗೂ ಮತದಾನದ ಹಕ್ಕು ನೀಡುವಂತೆ ಒತ್ತಾಯಿಸಿದ್ದಾರೆ. ಇದು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅನಿರೀಕ್ಷಿತ ಹೊಡೆತವನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿದ್ದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಂಗಾಲಾಗಿ ಹೋಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಅವರ ವಿರುದ್ಧ ಸುಳ್ಳು ಹೇಳಿಕೆಯನ್ನು ನೀಡಿ ಜನಸಾಮಾನ್ಯರನ್ನು ಮೋಸಗೊಳಿಸಲು ಯತ್ನಿಸುತ್ತಿದ್ದಾರೆ.
ನಮ್ಮ ರಾಜ್ಯದ ನಿಷ್ಠಾವಂತ ಮತದಾರರು ಈ ಬಿಜೆಪಿಯ ಜೆಡಿಎಸ್ ನಾಯಕರ ಈ ಡೋಂಗಿ ಹೇಳಿಕೆಗಳಿಗೆ ಬಲಿಯಾಗದೆ ಸಂಪೂರ್ಣವಾಗಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರದಂತೆ ತಡೆಯಬೇಕಾಗಿದೆ .
ನಮ್ಮ ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತದಾರರ ಪರವಾಗಿ ಮಾಡಿದ ಈ ಪ್ರತಿ ರೋಧದಿಂದಾಗಿ ನಮ್ಮ ದೇಶದ 13 ಕೋಟಿ ಮತದಾರರು ಇಂದು ಮರು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರು ಹಾಗೂ ಉಡುಪಿ ನಗರಸಭೆ ನಾಮ ನಿರ್ದೇಶಿತ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ಇವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
