ಬೆಂಗಳೂರು: ದಿನಾಂಕ:06-10-2026(ಹಾಯ್ ಉಡುಪಿ ನ್ಯೂಸ್) ಇಂದು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕಾಂಗ್ರೆಸ್ ಸರ್ಕಾರದ 100 ದಿನಗಳ ಕಾರ್ಯಕ್ರಮಗಳು, ನೇಮಕಾತಿ ಹಾಗೂ ಆದ್ಯತಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ನಡೆಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಚಿವರು ಹಾಗೂ ಕೃಷಿ, ಜವಳಿ, ಸಕ್ಕರೆ, ತೋಟಗಾರಿಕೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪಶುಸಂಗೋಪನೆ, ಗಣಿ ಮತ್ತು ಭೂವಿಜ್ಞಾನ, ಸಣ್ಣ ಕೈಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಗಳ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡು, ಮುಂದಿನ ಕಾರ್ಯಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡಿದರು.



