IMG_20261007_184353.png
Spread the love

ಮಲ್ಪೆ: ದಿನಾಂಕ : 07/10/2026 (ಹಾಯ್ ಉಡುಪಿ ನ್ಯೂಸ್) ಕೊಡವೂರು ಗ್ರಾಮದ ಮಲ್ಪೆ ಮೀನುಗಾರಿಕಾ ಬಂದರಿನ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಗಂಗಪ್ಪ ಎಸ್ ಅವರು ಬಂಧಿಸಿದ್ದಾರೆ.

ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಗಂಗಪ್ಪ ಎಸ್ ಅವರಿಗೆ ದಿನಾಂಕ: 06-10-2026 ರಂದು ಠಾಣೆಯ ಸಿಬ್ಬಂಧಿ ಯವರು ಕರೆ ಮಾಡಿ ಕೊಡವೂರು ಗ್ರಾಮದ ಕರಾವಳಿ ಕಾವಲು ಪೊಲೀಸ್ ಪಡೆಯ ಕೇಂದ್ರ ಕಚೇರಿಯ ಎದುರು ಮಲ್ಪೆ ಮೀನುಗಾರಿಕಾ ಬಂದರಿನ ಬಳಿ ಒಬ್ಬಾತ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಹೊಂದಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ ಎಂಬ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಪಿಎಸ್ಐ ಯವರು ಠಾಣೆಯ ಸಿಬ್ಬಂದಿಗಳನ್ನು ಕರೆದುಕೊಂಡು ಮಾಹಿತಿ ಬಂದ ಸ್ಥಳಕ್ಕೆ  ದಾಳಿ ನಡೆಸಿದ್ದಾರೆ .

ದಾಳಿ ನಡೆಸಿದ ಸ್ಥಳದಲ್ಲಿ ಕಪ್ಪು ಬಣ್ಣದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿತ ಮಲ್ಲೇಶಪ್ಪ, (31) ಎಂಬಾತನನ್ನು ಹಿಡಿದು ವಿಚಾರಣೆ ನಡೆಸಿದಾಗ ಆತನು ಯಾವುದೇ ಪರವಾನಿಗೆ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದು ;ಅಲ್ಲದೇ  ಆತನಲ್ಲಿದ್ದ ಮದ್ಯವನ್ನು ಮಲ್ಪೆಯ ಅಸುಪಾಸಿನ ವೈನ್ ಶಾಪ್‌ ಗಳಲ್ಲಿ ಖರೀದಿಸಿ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾನೆ, ನಂತರ ಆತನ ಬಳಿ ಇದ್ದ ಬೇರೆ ಬೇರೆ ಬ್ರ್ಯಾಂಡ್ ನ ಒಟ್ಟು 32 ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ ಗಳು ಅದರ ಒಟ್ಟು ಅಂದಾಜು ಮೌಲ್ಯ ಸುಮಾರು ರೂಪಾಯಿ 2500/- ಹಾಗೂ ಆತನ ಬಳಿಯಿದ್ದ ಮದ್ಯ ಮಾರಾಟದಿಂದ ಬಂದ ಹಣ ರೂಪಾಯಿ 2140/- ನ್ನು ಸ್ವಾಧಿನಪಡಿಕೊಂಡಿದ್ದಾರೆ ಎಂದು  ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 111/2026 ಕಲಂ:32, 34 ಕರ್ನಾಟಕ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

error: No Copying!