FB_IMG_1791384568368.jpg
Spread the love

ದಿನಾಂಕ:08-10-2026(ಹಾಯ್ ಉಡುಪಿ ನ್ಯೂಸ್)

ಉಡುಪಿ: ಕರ್ನಾಟಕ ಭೋವಿ ಅಭಿವೃದ್ಧಿ  ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಎಂ ರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು .

ಈ ಸಭೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಎಂ ರಾಮಪ್ಪ ಸರಕಾರದ ವತಿಯಿಂದ ಭೋವಿ ಸಮಾಜದ ಜನರ ಅಭಿವೃದ್ಧಿಗಾಗಿ ಜಾರಿಗೊಳಿಸಲಾದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸುವ ಸಂಬಂಧ ಹಾಗೂ ಜಾತಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮತ್ತು ಸಮುದಾಯದ ಜನರ ಕುಂದು ಕೊರತೆಗಳು, ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುವ ತೊಂದರೆಗಳ ಬಗ್ಗೆ ಗರಿಷ್ಟ ಮಟ್ಟದಲ್ಲಿ ಪರಿಹರಿಸುವ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

error: No Copying!