HT8xjY0aoAAt6rJ.jpg
Spread the love

ಬೆಂಗಳೂರು : ದಿನಾಂಕ:08-10-2026(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (SIR) ಸಂಬಂಧಪಟ್ಟಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ಸಚಿವರು, ಶಾಸಕರು ಹಾಗೂ ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಮತಗಳವು ಕುರಿತು ಸಮಾಲೋಚನೆ ನಡೆಸಿದರು.

ಈ ವೇಳೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಸಚಿವರಾದ ಶ್ರೀ ಕೆ.ಹೆಚ್‌. ಮುನಿಯಪ್ಪ, ಶ್ರೀ ಶಿವಲಿಂಗೇಗೌಡ, ಶ್ರೀ ಜಮೀರ್‌ ಅಹ್ಮದ್‌ ಖಾನ್‌, ಶ್ರೀ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶ್ರೀ ಹೆಚ್‌.ಸಿ. ಬಾಲಕೃಷ್ಣ, ಶ್ರೀ ಪುಟ್ಟರಂಗಶೆಟ್ಟಿ, ಶ್ರೀ ಟಿ. ರಘುಮೂರ್ತಿ, ಶ್ರೀ ಕೆ.ಎಸ್‌. ಬಸವಂತಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

error: No Copying!