Spread the love

ಉಡುಪಿ: ಜೂನ್ ೧೩(ಹಾಯ್ ಉಡುಪಿ ನ್ಯೂಸ್) ನಗರದ ಸಿಟಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದವರನ್ನು ಬಂಧಿಸಿದ ಘಟನೆ ಇಂದು ನಡೆದಿದೆ.

ಉಡುಪಿ ನಗರ ಪೊಲೀಸ್‌ ಠಾಣೆ ಪಿಎಸ್ಐ ಮಹೇಶ್ ಟಿ.ಎಂ ಇವರಿಗೆ ದಿನಾಂಕ: 13/06/2022 ರಂದು ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಉಡುಪಿ ಸಿಟಿ ಬಸ್‌ ನಿಲ್ದಾಣದ ಬಳಿಯಲ್ಲಿರುವ ಮಲ್ಪೆ ಬಸ್‌ ನಿಲ್ದಾಣದ  ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಖಚಿತ ಮಾಹಿತಿ ದೊರೆತ ಮೇರೆಗೆ ಠಾಣಾ ಸಿಬ್ಬಂದಿಯವರೊಂದಿಗೆ ಬೆಳಿಗ್ಗೆ  08:20  ಗಂಟೆಗೆ ಸ್ಥಳಕ್ಕೆ ತೆರಳಿ ಖಚಿತಪಡಿಸಿಕೊಂಡು 08:25 ಗಂಟೆಗೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಸಂಜೀವ ದೇವಾಡಿಗ ಉಡುಪಿ ಮತ್ತು ಕುಶಾಲ್ ಶೆಟ್ಟಿ ಕುಂದಾಪುರ ಎಂಬವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾವು ಕಮೀಷನ್‌ ಹಣಕೋಸ್ಕರ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣವನ್ನು ಸಂಗ್ರಹಿಸುತ್ತಿದ್ದು, ತಾವು ಸಂಗ್ರಹಿಸುತ್ತಿದ್ದ ಹಣವನ್ನು ಲಿಯೋ ಎಂಬವರ ಪರವಾಗಿ  ಆತನ  ಹೆಂಡತಿಯಾದ  ಶ್ರೀಮತಿ ಗ್ರೆಟ್ಟಾ ಬಾಯಿರವರಿಗೆ ಕೊಡುತ್ತಿರುವುದಾಗಿ ತಿಳಿಸಿದ್ದು, ಅವರ  ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂ 6,660/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ- 1, ಬಾಲ್‌ಪೆನ್‌-1 ಮತ್ತು ಅವರ  ವಶದಲ್ಲಿದ್ದ 4,000/- ರೂಪಾಯಿ ಮೌಲ್ಯದ ವಿವೋ ಮೊಬೈಲ್‌ ಫೋನ್‌-1, 1,000/- ರೂ. ಮೌಲ್ಯದ ನೋಕಿಯಾ ಕಂಪೆನಿಯ ಕೀಪ್ಯಾಡ್ ಮೊಬೈಲ್‌ ಫೋನ್‌-1 ನ್ನು ಸ್ವಾಧೀನಪಡಿಸಿಕೊಂಡಿದ್ದು ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

error: No Copying!