🎙️ ಬ್ರೇಕಿಂಗ್ ನ್ಯೂಸ್
ಉತ್ತರ ಪ್ರದೇಶ: ದಿನಾಂಕ:26-10-2026(ಹಾಯ್ ಉಡುಪಿ ನ್ಯೂಸ್) ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಪ್ರಯಾಣದ ವೇಳೆ ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಸೋಮವಾರ ಬೆಳಿಗ್ಗೆ ಸುಮಾರು 10:15ರ ವೇಳೆಗೆ ಸುಲ್ತಾನ್‌ಪುರ ಜಿಲ್ಲೆಯ ಹಲಿಯಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಮುಂಭಾಗದಲ್ಲಿದ್ದ ಖಾಸಗಿ ವಾಹನವು ದಿಢೀರ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಕೆಲವು ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿವೆ.
ಆದರೆ ರಾಹುಲ್ ಗಾಂಧಿ ಅವರ ಕಾರು ಈ ಅಪಘಾತದಲ್ಲಿ ಭಾಗಿಯಾಗಿಲ್ಲ. ಅವರು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.
