ಬೆಂಗಳೂರು: ದಿನಾಂಕ:29-10-2026(ಹಾಯ್ ಉಡುಪಿ ನ್ಯೂಸ್)ಅಖಿಲ ಭಾರತ ಅಗ್ನಿಶಾಮಕ ಸೇವಾ ಕ್ರೀಡಾ ನಿಯಂತ್ರಣ ಮಂಡಳಿ ಆಯೋಜಿಸಿರುವ 2ನೇ ಅಖಿಲ ಭಾರತ ಅಗ್ನಿಶಾಮಕ ಸೇವಾ ಕ್ರೀಡಾಕೂಟವನ್ನು ಗ್ರಹ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.
ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ಮನುಷ್ಯನ ಕ್ರಿಯಾಶೀಲತೆಯನ್ನು ಜಾಗೃತಗೊಳಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದು, ಅಖಿಲ ಭಾರತದ ಮಟ್ಟದಲ್ಲಿ ನಡೆಯುತ್ತಿರುವ ಈ ವಿಶೇಷ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ದೇಶದ ವಿವಿಧ ಭಾಗಗಳಿಂದ ಅಗ್ನಿಶಾಮಕ ಸೇವಾ ಸಿಬ್ಬಂದಿಗಳ 36 ತಂಡಗಳು ಭಾಗವಹಿಸಿವೆ, 574 ಸ್ಪರ್ಧಿಗಳು ಇರುವ ಈ ಕ್ರೀಡಾಕೂಟದ ಕ್ರೀಡೆಗಳು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕಾರ್ಯಾಚರಣೆಯ ಮಾದರಿಯಲ್ಲೇ ಇರುವುದು ವಿಶೇಷ.


ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಕ್ರೀಡಾಕೂಟವು ಆಯೋಜನೆಗೊಂಡಿರುವುದು ಮತ್ತೊಂದು ವಿಶೇಷ ಸಂಗತಿ.
ಈ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ವಿಜೇತರಾದವರು ಮುಂದೆ ಆಸ್ಟ್ರೇಲಿಯಾದಲ್ಲಿ ನಡೆಯುವ ಜಾಗತಿಕ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ, ಎಂದು ಹೇಳಿದ ಸಚಿವರು;
ದೇಶದ ಎಲ್ಲಾ ರಾಜ್ಯಗಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಪಾಲ್ಗೊಳ್ಳುತ್ತಿರುವ ಕ್ರೀಡಾಕೂಟದ ಎಲ್ಲಾ ಸ್ಪರ್ಧಿಗಳಿಗೆ ಶುಭಹಾರೈಸಿದರು.
