IMG_20261111_175032.png
Spread the love

ಬ್ರಹ್ಮಾವರ: ದಿನಾಂಕ :11-11-2026(ಹಾಯ್ ಉಡುಪಿ ನ್ಯೂಸ್)  ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಮಾಡಿದ ಮೂವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನ. 9ರಂದು ರಾತ್ರಿ ಸುಮಾರು 10 ಗಂಟೆಗೆ ಬ್ರಹ್ಮಾವರ ತಾಲೂಕು ಚೇರ್ಕಾಡಿ ಗ್ರಾಮದ ಪೇತ್ರಿ ನ್ಯೂ ಕುಬೇರ ಬಾರ್ ಆ್ಯಂಡ್ ರೆಸ್ಟೋರೆಂಟ್ ಸಮೀಪ 2-3 ಮಂದಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು.

ಮಾಹಿತಿಯ ಮೇರೆಗೆ ಠಾಣೆಯ ಸಿಬ್ಬಂದಿಯೊಂದಿಗೆ ರಾತ್ರಿ ಸುಮಾರು 10:30ಕ್ಕೆ ಸ್ಥಳಕ್ಕೆ ತೆರಳಿದ ಪೊಲೀಸರು, ಸುನೀಲ್ ನಾಯ್ಕ್, ರೋಶನ್ ಡಿಸೋಜಾ ಹಾಗೂ ರೂಪೇಶ್ ಶೆಟ್ಟಿ ಎಂಬವರು ಹಣಕಾಸಿನ ವಿಚಾರದಲ್ಲಿ ಜಗಳವಾಡಿಕೊಂಡು, ಪರಸ್ಪರ ದೂಡಾಡುತ್ತಾ ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊಡೆದಾಡುತ್ತಿರುವುದನ್ನು ಗಮನಿಸಿದ್ದಾರೆ.
ಪೊಲೀಸರನ್ನು ಕಂಡು ಓಡಿಹೋಗಲು ಯತ್ನಿಸಿದ ಮೂವರನ್ನು ಸುತ್ತುವರಿದು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹಣಕಾಸಿನ ವಿಚಾರದಲ್ಲಿ ಉಂಟಾದ ಗಲಾಟೆಯಿಂದ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟುಮಾಡಿರುವುದು ಕಂಡುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 209/2026, ಕಲಂ 194(2) BNS ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

error: No Copying!