HW_jYwCbYAEua7L.jpg
Spread the love

ಬೆಂಗಳೂರು: ಐಐಎಂ ಬೆಂಗಳೂರು ಆಡಿಟೋರಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ₹15,600 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಪೂರ್ಣಗೊಂಡ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಹೊಸ ಯೋಜನೆಗಳು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಆಯಾಮ ನೀಡಲಿವೆ. ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರಲು ಹಾಗೂ ಭವಿಷ್ಯದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಲು ಅನುಕೂಲವಾಗಲಿವೆ ಎಂದು ಹೇಳಿದರು..

ಈ ಸಂದರ್ಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್‌, ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಹಾಗೂ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

error: No Copying!