ಬೆಂಗಳೂರು: ದಿನಾಂಕ:16-11-2026(ಹಾಯ್ ಉಡುಪಿ ನ್ಯೂಸ್) ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಮಾತನಾಡಿದ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜನಸಾಮಾನ್ಯರ ಧ್ವನಿಯಾಗಿ, ಸತ್ಯದ ಕಾವಲುಗಾರರಾಗಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುತ್ತಿರುವ ಸಮಸ್ತ ಪತ್ರಕರ್ತರು ಮತ್ತು ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಸತ್ಯವನ್ನೇ ವರದಿ ಮಾಡುವ ನಿರ್ಭೀತ ಪತ್ರಿಕೋದ್ಯಮವೇ ಆರೋಗ್ಯಕರ ಸಮಾಜದ ನಿಜವಾದ ಶಕ್ತಿ. ಈ ದಿನವು, ಮುಕ್ತ ಮತ್ತು ಸ್ವತಂತ್ರ ಪತ್ರಿಕೋದ್ಯಮದ ಅಗತ್ಯತೆಯನ್ನು ಸಾರುತ್ತದೆ. ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿಗಳು ವೇಗವಾಗಿ ಹರಡುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಸತ್ಯಾಸತ್ಯತೆಯನ್ನು ಸಮಾಜದ ಮುಂದಿಡುವ ಪತ್ರಿಕಾರಂಗದ ಹೊಣೆಗಾರಿಕೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಇಂದು ಹೇಳಿದರು..
