HXPI96JagAAu7ni.jpg
Spread the love

ಬೆಂಗಳೂರು: ದಿನಾಂಕ:16-11-2026(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಇಂದು ಕುಮಾರಕೃಪಾ ರಸ್ತೆಯಲ್ಲಿರುವ ಸರ್ಕಾರಿ ಅಧಿಕೃತ ನಿವಾಸದ ಗೃಹಪ್ರವೇಶ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಿದರು.

ನಮ್ಮ ಸಂಸ್ಕೃತಿಯಲ್ಲಿ ನದಿಗಳಿಗೆ ವಿಶೇಷ ಗೌರವ ಮತ್ತು ಪೂಜ್ಯಭಾವವಿದೆ. ಅದೇ ಆಶಯದೊಂದಿಗೆ ಈ ಸರ್ಕಾರಿ ನಿವಾಸಕ್ಕೆ ʻಗಂಗಾʻ ಎಂದು ನಾಮಕರಣ ಮಾಡಲಾಗಿದೆ. ಇಲ್ಲಿನ ಪ್ರತಿಯೊಂದು ಕೊಠಡಿಗೂ ಕಬಿನಿ, ಹೇಮಾವತಿ, ಶಿಂಷಾ ಹಾಗೂ ತುಂಗಭದ್ರಾ ಸೇರಿದಂತೆ ನಮ್ಮ ನಾಡಿನ ಜೀವನಾಡಿ ನದಿಗಳ ಹೆಸರನ್ನಿಡಲಾಗಿದೆ.

ನಮ್ಮ ನಾಡಿನ ಹೆಮ್ಮೆಯ ಮುಖ್ಯಮಂತ್ರಿಗಳಾದ ಎಸ್‌. ನಿಜಲಿಂಗಪ್ಪ ಅವರು ವಾಸ್ತವ್ಯ ಹೂಡಿದ್ದ ಈ ಕಟ್ಟಡದ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ, ಅದರ ಮಹತ್ವವನ್ನು ಕಾಪಾಡಿಕೊಂಡೇ ನವೀಕರಿಸಿ ಮತ್ತಷ್ಟು ಮೆರುಗು ನೀಡಲಾಗಿದೆ.

ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು, ಸ್ವೀಕರಿಸುವ ದಾಖಲೆಗಳನ್ನು ನಿರ್ವಹಿಸಲು ಹಾಗೂ ಸಭೆ-ಸಮಾರಂಭಗಳ ಆಯೋಜನೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ನಿಮಗಾಗಿ, ನಿಮ್ಮ ಸೇವೆಗಾಗಿ ʻಗಂಗಾʼ ಬಾಗಿಲು ಸದಾ ತೆರದಿರುತ್ತದೆ ಎಂದು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಈ ಸಂದರ್ಭದಲ್ಲಿ ಮಾತನಾಡಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ..

error: No Copying!