IMG_20261119_193540.png
Spread the love

ಕುಂದಾಪುರ: ದಿನಾಂಕ:19-11-2026( ಹಾಯ್ ಉಡುಪಿ ನ್ಯೂಸ್)ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರೊಬ್ಬರು ಹೋಟೆಲ್ ಸಮೀಪದ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.
ಮೃತರನ್ನು ಗುಜ್ಜಾಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ರಾಮ ಕೊರಗ (46) ಎಂದು ಗುರುತಿಸಲಾಗಿದೆ. ಇವರು ಕುಂದಾಪುರದ ಶರೋನ್ ಹೋಟೆಲ್‌ನ ಬಂಜಾರ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಸ್ಟೀವಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ನ.19ರಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಹೋಟೆಲ್ ಕೆಲಸಗಾರರು ಎದ್ದಾಗ ರಾಮ ಕೊರಗ ಅವರು ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಇದ್ದರು. ಬಾಯಿಯಿಂದ ನೀರು ಬರುತ್ತಿದ್ದು, ಮಾತನಾಡುವ ಸ್ಥಿತಿಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಸಹೋದ್ಯೋಗಿಗಳು ತಕ್ಷಣ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮೃತರ ಅಣ್ಣ ಎಂ. ದೇವದಾಸ ಖಾರ್ವಿ (70) ಅವರು ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಕ್ರಮಾಂಕ 40/2026, ಕಲಂ 194 ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

error: No Copying!