ಬೆಂಗಳೂರು: ದಿನಾಂಕ:19-11-2026(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಸಚಿವರಾದ ಶ್ರೀ ಯು.ಟಿ. ಖಾದರ್ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಸಭೆ ನಡೆಸಿ, ಅವರ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು.




ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಶಾ ಕಾರ್ಯಕರ್ತೆಯರು ಮುಂದಿಟ್ಟಿದ್ದು, ಈ ಕುರಿತು ಸಚಿವ ಸಂಪುಟ, ಸಂಬಂಧಪಟ್ಟ ಸಚಿವರು ಹಾಗೂ ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷರಾದ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿಯಾದ ಡಿ. ನಾಗಲಕ್ಷ್ಮಿ ಅವರು ಉಪಸ್ಥಿತರಿದ್ದರು.
