ಬೆಂಗಳೂರು: ದಿನಾಂಕ:20-11-2026(ಹಾಯ್ ಉಡುಪಿ ನ್ಯೂಸ್)
ವಿಧಾನಸೌಧದಲ್ಲಿ ಇಂದು ನಡೆದ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ನಡೆಯುವ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಹಾಗೂ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಸುಭದ್ರ, ಪಾರದರ್ಶಕ ವ್ಯವಸ್ಥೆಯ ಮೂಲಕ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ..
ನೇಮಕಾತಿ ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳ ಜೊತೆಗೆ ಅಭ್ಯರ್ಥಿಗಳು ಶಾಲಾ ಕಾಲೇಜುಗಳಲ್ಲಿ ಪಡೆದಿರುವ ಅಂಕಗಳನ್ನು ಕೂಡ ಪರಿಗಣಿಸುವ ಅಗತ್ಯವಿದೆ. ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು, ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡಲಾಗಿಲ್ಲ.
ನೀಟ್ ಪರೀಕ್ಷೆಯಲ್ಲಿ, ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ರಾಜ್ಯದ ಅಭ್ಯರ್ಥಿಗಳಿಗೇ ಹೆಚ್ಚಿನ ಅವಕಾಶ ದೊರೆಯಬೇಕು. ನೀಟ್ ಮುಂತಾದ ರಾಷ್ಟ್ರ ಮಟ್ಟದ ಪರೀಕ್ಷೆಗಳಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಿಸುವುದು ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಬೇಕು. ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೀಟುಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕು ಎಂದು ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ತಿಳಿಸಿದ್ದಾರೆ.


