IMG_20261124_212945.png
Spread the love

ಕಾರ್ಕಳ: ದಿನಾಂಕ:24-11-2026(, ಹಾಯ್ ಉಡುಪಿ ನ್ಯೂಸ್) ಕಾರ್ಕಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳರು ವಿಜ್ಞಾನ ಪ್ರಯೋಗಾಲಯದ ಬೀಗ ಮುರಿದು ಲ್ಯಾಪ್‌ಟಾಪ್‌, ಟಿವಿ ಸೇರಿದಂತೆ ವಿವಿಧ ವಿದ್ಯುತ್ ಉಪಕರಣಗಳನ್ನು ಕಳವು ಮಾಡಿಕೊಂಡು ಹೋದ ಘಟನೆ ವರದಿಯಾಗಿದೆ.
ಕಾಲೇಜಿನ ಮುಖ್ಯಸ್ಥರಾದ ಮಲ್ಲಿಕಾ ಕೆ.ಜಿ. (48) ಅವರು ನ.21ರಂದು ಮಧ್ಯಾಹ್ನ 1.30ರ ಸುಮಾರಿಗೆ ವಿಜ್ಞಾನ ಪ್ರಯೋಗಾಲಯದ ವಿಭಾಗದ ಹಾಲ್‌ಗೆ ಬೀಗ ಹಾಕಿ ತೆರಳಿದ್ದರು. ನ.23ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಆಗಮಿಸಿ ಪರಿಶೀಲಿಸಿದಾಗ ಪ್ರಯೋಗಾಲಯದ ಕೊಠಡಿಯ ಬೀಗ ಮುರಿದಿರುವುದು ಕಂಡುಬಂದಿದೆ.
ಒಳಗೆ ಪರಿಶೀಲಿಸಿದಾಗ ಲ್ಯಾಪ್‌ಟಾಪ್‌, ಟಿವಿ ಹಾಗೂ ಇತರ ವಿದ್ಯುತ್ ಉಪಕರಣಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ₹30,000 ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 147/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 331(3), 331(4) ಮತ್ತು 305ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: No Copying!