IMG-20261125-WA0035.jpg
Spread the love

ಉಡುಪಿ: ದಿನಾಂಕ:25-11-2026 (ಹಾಯ್ ಉಡುಪಿ ನ್ಯೂಸ್) ನಗರದ ಪೂರ್ಣ ಪ್ರಜ್ಞಾ ಕಾಲೇಜಿನ ಪರಿಸರದಲ್ಲಿ ಕೆಲವು ಯುವಕರು ಕರ್ಕಶ ಸೈಲೆನ್ಸರ್ ಅಳವಡಿಸಿದ್ದ ದ್ವಿಚಕ್ರ ವಾಹನಗಳನ್ನು ಚಲಾಯಿಸುತ್ತಾ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎಂಬ ದೂರಿನ ಮೇರೆಗೆ ನಗರ ಟ್ರಾಫಿಕ್ ಪೊಲೀಸರು ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ತೆರಳಿ ಅಲ್ಲಿ ದ್ವಿಚಕ್ರ ವಾಹನದಲ್ಲಿ ಕರ್ಕಶ ಸೈಲೆನ್ಸರ್ ಅಳವಡಿಸಿ ಕಾಲೇಜು ರಸ್ತೆಯಲ್ಲಿ ಸುತ್ತು ಹೊಡೆಯುತ್ತಿದ್ದ ಯುವಕರ ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಈ ಬಗ್ಗೆ ಉಡುಪಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: No Copying!