ಕುಂದಾಪುರ: ದಿನಾಂಕ:26-11-2026(ಹಾಯ್ ಉಡುಪಿ ನ್ಯೂಸ್) ಮೂಡ್ಲಕಟ್ಟೆ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ವ್ಯಕ್ತಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ನಿರಂಜನ್ ಗೌಡ ಬಿ ಎಸ್ ಅವರು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ನಿರಂಜನ್ ಗೌಡ ಅವರಿಗೆ ಕುಂದಾಪುರ ತಾಲೂಕು ಕಂದಾವರ ಗ್ರಾಮದ ಮೂಡ್ಲಕಟ್ಟೆ ಬಸ್ ನಿಲ್ದಾಣದ ಬಳಿ ಒಬ್ಬ ವ್ಯಕ್ತಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದಿದ್ದು ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ತೆರಳಿದ್ದಾರೆ.
ಮಾಹಿತಿ ಬಂದ ಸ್ಥಳದಲ್ಲಿ ಇದ್ದ ವ್ಯಕ್ತಿ ಯನ್ನು ವಿಚಾರಿಸಿ ವೈದ್ಯಕೀಯ ಪರೀಕ್ಷೆ ಬಗ್ಗೆ ಕಳುಹಿಸಿದ್ದು ಇತನನ್ನು ಪರೀಕ್ಷಿಸಿದ ವೈದ್ಯರು ಗಾಂಜಾ ಸೇವಿಸಿರುವ ಬಗ್ಗೆ ದೃಢಪಡಿಸಿ ದೃಡಪತ್ರ ನೀಡಿರುತ್ತಾರೆ.
ಆದುದರಿಂದ ಆಪಾದಿತ ಖಲೀಲ್ (20) ನೇರಳಕಟ್ಟೆ ಪೋಸ್ಟ್ , ಕರ್ಕುಂಜೆ ಗ್ರಾಮ ಕುಂದಾಪುರ ಎಂಬವನ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 65/2026 ಕಲಂ: 27 (B) NDPS ACT ರಂತೆ ಪ್ರಕರಣ ದಾಖಲಾಗಿದೆ.
