ಬೆಂಗಳೂರು: ಕನಕದಾಸರ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಕನಕದಾಸರ ಪ್ರತಿಮೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನಗಳನ್ನು ಅರ್ಪಿಸಿದರು.
ಈ ವೇಳೆ ಸಚಿವರಾದ ಶ್ರೀ ಶಿವರಾಜ ತಂಗಡಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಹೆಚ್.ಎಂ. ರೇವಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



